Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದದರಿಂದ ಅವನು ವಿುಕ್ಕ ಮುಖ್ಯಾಧಿಕಾರಿಗಳಿಗಿಂತಲೂ ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು; ಅವನನ್ನು ರಾಜನು ಪೂರ್ಣರಾಜ್ಯದ ಮೇಲೆ ನೇವಿುಸಲು ಉದ್ದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:3
12 ತಿಳಿವುಗಳ ಹೋಲಿಕೆ  

ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.


ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.


ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.


ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.


ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.


ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.


ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು