5 ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.