Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ದಾನಿಯೇಲನಾದ ನಾನು ಗಲಿಬಿಲಿಗೊಳಗಾದೆ ಮತ್ತು ತೊಂದರೆಪಟ್ಟೆ, ನಾನು ಕಂಡ ದರ್ಶನಗಳು ನನ್ನನ್ನು ಮನೋವ್ಯಥೆಗೆ ಒಳಪಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:15
18 ತಿಳಿವುಗಳ ಹೋಲಿಕೆ  

ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.


ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.


ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.


ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.


ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು