Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು - ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾ ಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾನಿಯೇಲನು ಹೀಗೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಆ ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:2
13 ತಿಳಿವುಗಳ ಹೋಲಿಕೆ  

ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.


ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.


ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,


ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.


ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.


ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.


ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!


ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು