21 ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲೆ ಕಣ್ಣುಳ್ಳದ್ದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇತ್ತೋ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನೂ ತಿಳಿದುಕೊಳ್ಳಬೇಕೆಂದು ವಿಚಾರಿಸಿದೆ.
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.