ದಾನಿಯೇಲ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.