ದಾನಿಯೇಲ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಹತ್ತು ಕೊಂಬುಗಳ ವಿಷಯವೇನಂದರೆ ಆ ರಾಜ್ಯದಲ್ಲಿ ಹತ್ತುಮಂದಿ ಅರಸರು ಉಂಟಾಗುವರು; ಅವರ ತರುವಾಯ ಮತ್ತೊಬ್ಬನು ತಲೆದೋರುವನು; ಅವನು ಮುಂಚಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಅದುವಿುಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅಧ್ಯಾಯವನ್ನು ನೋಡಿ |