Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:28
19 ತಿಳಿವುಗಳ ಹೋಲಿಕೆ  

ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.


ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.


ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.


“ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.


ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.


ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.


ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.


ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.


“ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.


ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.


ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.


ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು