Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:4
27 ತಿಳಿವುಗಳ ಹೋಲಿಕೆ  

ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.


ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.


ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.


ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.


ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.


ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”


ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.


ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.


ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು