Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:8
15 ತಿಳಿವುಗಳ ಹೋಲಿಕೆ  

ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.


ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.


ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,


ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು