ದಾನಿಯೇಲ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನೂ ನೆಲಕ್ಕೆ ಕೆಡವಿ ತುಳಿದುಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದು ನಕ್ಷತ್ರಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಚಿಕ್ಕ ಕೊಂಬು ಬಹಳ ದೊಡ್ಡದಾಯಿತು. ಅದು ಆಕಾಶಕ್ಕೆ ಮುಟ್ಟುವಂತೆ ಬೆಳೆಯಿತು. ಆ ಚಿಕ್ಕ ಕೊಂಬು ಆಕಾಶದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಬೀಳಿಸಿತು ಮತ್ತು ಎಲ್ಲ ನಕ್ಷತ್ರಗಳ ಮೇಲೆ ಹತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು. ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.