ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.