ದಾನಿಯೇಲ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು. ಅಧ್ಯಾಯವನ್ನು ನೋಡಿ |