Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಅದನ್ನು ಗಮನಿಸುತ್ತಿರುವಾಗಲೇ ಹೋತವೊಂದು ಪಶ್ಚಿಮದಿಂದ ಹೊರಟುಬಂದಿತು. ಅದು ಜಗವೆಲ್ಲವನ್ನು ದಾಟಿಕೊಂಡು ನೆಲವನ್ನು ಸೋಕದೆ, ಅಲ್ಲಿಗೆ ಧಾವಿಸಿತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಡುವಲಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಸೋಕದೆ ಓಡಿಬಂತು; ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಈ ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದುಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಇದರ ಬಗ್ಗೆ ಆಲೋಚಿಸಲಾಗಿ ಕೂಡಲೆ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದೆ ಭೂಮಂಡಲವನ್ನೆಲ್ಲಾ ದಾಟಿಕೊಂಡು ಬಂದಿತು. ಆ ಹೋತಕ್ಕೆ ಕಣ್ಣುಗಳ ಮಧ್ಯೆ ವಿಶೇಷವಾದ ಕೊಂಬು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:5
7 ತಿಳಿವುಗಳ ಹೋಲಿಕೆ  

ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.


ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.


ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.


“ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.


ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,


ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು