ದಾನಿಯೇಲ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದು ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ ಅದರ ಮೇಲಣ ಕ್ರೋಧದಿಂದುರಿಯುತ್ತಾ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು; ಅದಕ್ಕೆ ಎದುರುಬೀಳಲು ಟಗರಿಗೆ ಏನೂ ಶಕ್ತಿಯಿರಲಿಲ್ಲ; ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು; ಟಗರನ್ನು ಅದರ ಕೈಯಿಂದ ಬಿಡಿಸುವ ಪ್ರಾಣಿ ಯಾವದೂ ಇರಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹೋತವು ಟಗರಿನ ಕಡೆಗೆ ಓಡುವದನ್ನು ನಾನು ನೋಡುತ್ತಿದ್ದೆ. ಅದು ಅತಿ ಕೋಪದಿಂದ ಟಗರಿನ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಟಗರಿಗೆ ಆ ಹೋತವನ್ನು ತಡೆದು ನಿಲ್ಲಿಸಲಾಗಲಿಲ್ಲ. ಆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು. ಟಗರನ್ನು ಹೋತದಿಂದ ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.