ದಾನಿಯೇಲ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲ ಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆ ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ. ಅಧ್ಯಾಯವನ್ನು ನೋಡಿ |