ದಾನಿಯೇಲ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ನನ್ನ ಮೊರೆಯನ್ನು ಕೇಳು. ಯೆಹೋವನೇ, ನಮ್ಮನ್ನು ಕ್ಷಮಿಸು. ಯೆಹೋವನೇ, ನಮ್ಮ ಕಡೆಗೆ ಗಮನ ನೀಡಿ ಸಹಾಯಮಾಡು. ತಡಮಾಡಬೇಡ. ಈಗಲೇ ಸಹಾಯಮಾಡು. ನಿನ್ನ ಮಹಿಮೆಗಾಗಿಯೇ ಸಹಾಯಮಾಡು. ನನ್ನ ದೇವರೇ, ನಿನ್ನ ಹೆಸರಿನಿಂದ ಕರೆಯಲ್ಪಡುವ ನಿನ್ನ ನಗರಕ್ಕಾಗಿಯೂ ನಿನ್ನ ಜನರಿಗಾಗಿಯೂ ಈಗಲೇ ಸಹಾಯಮಾಡು” ಎಂದು ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.” ಅಧ್ಯಾಯವನ್ನು ನೋಡಿ |