ದಾನಿಯೇಲ 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು. ಅಧ್ಯಾಯವನ್ನು ನೋಡಿ |