Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:5
31 ತಿಳಿವುಗಳ ಹೋಲಿಕೆ  

“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.


ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.


ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.


“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!


“ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.


ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.


ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.


ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು