Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸಂಖ್ಯೆಯಲ್ಲಿ ಹೆಚ್ಚಿಸಿದ್ದಾರೆ; ನೀವು ಆಕಾಶದ ನಕ್ಷತ್ರಗಳಷ್ಟಾಗಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:10
17 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.


ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.


ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.


ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.


ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.


ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು