ಧರ್ಮೋಪದೇಶಕಾಂಡ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ. ಅಧ್ಯಾಯವನ್ನು ನೋಡಿ |