ಧರ್ಮೋಪದೇಶಕಾಂಡ 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸುವೆವು. ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಮತ್ತು ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ” ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, ‘ನಮಗಿಂತ ಮುಂದಾಗಿ ಜನರನ್ನು ಕಳುಹಿಸುತ್ತೇವೆ; ಅವರು ನಮ್ಮ ಪರವಾಗಿ ಆ ನಾಡನ್ನು ಪರೀಕ್ಷಿಸಿನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ಬಗ್ಗೆ ಹಾಗು ಸೇರಬೇಕಾದ ಊರುಗಳ ಬಗ್ಗೆ ನಮಗೆ ಸಮಾಚಾರ ತರಲಿ’, ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ನೀವೆಲ್ಲರೂ ನನ್ನ ಬಳಿಗೆ ಬಂದು - ನಮಗಿಂತ ಮುಂದಾಗಿ ಮನುಷ್ಯರನ್ನು ಕಳುಹಿಸುವೆವು; ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಆದರೆ ನೀವೆಲ್ಲಾ ನನ್ನ ಬಳಿಗೆ ಬಂದು, ‘ಆ ದೇಶವನ್ನು ಸಂಚರಿಸಿ ಅದರ ಬಲವುಳ್ಳ ಮತ್ತು ಬಲಹೀನ ಸ್ಥಳಗಳನ್ನು ನೋಡಿಕೊಂಡು ನಾವು ಯಾವ ಮಾರ್ಗವಾಗಿ ಹೋಗಬೇಕು ಮತ್ತು ಯಾವಯಾವ ಪಟ್ಟಣಗಳನ್ನು ದಾಟಬೇಕು ಎಂಬುದನ್ನು ನಮಗೆ ತಿಳಿಸಲು ನಮ್ಮಲ್ಲಿ ಕೆಲವರನ್ನು ಕಳುಹಿಸಿ’ ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ನೀವೆಲ್ಲರು ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸೋಣ. ಅವರು ನಮಗೆ ದೇಶವನ್ನು ಸಂಚರಿಸಿ ನೋಡಿ, ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತರಲಿ,” ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿ |