Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ, ಎಷ್ಕೋಲ್ ಎಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶದಲ್ಲಿ ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಹೋಗಿ ಆ ಮಲೆನಾಡನ್ನು ಹತ್ತಿ ಎಷ್ಕೋಲೆಂಬ ಕಣಿವೆಯ ಬಳಿಗೆ ಬಂದು, ಆ ಪ್ರದೇಶವನ್ನು ಸಂಚರಿಸಿ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ ಎಷ್ಕೋಲೆಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶವನ್ನು ಸಂಚರಿಸಿ ನೋಡಿ ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ಹೊರಟುಹೋಗಿ ಬೆಟ್ಟಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ಹೋಗಿ ಬೆಟ್ಟವನ್ನೇರಿ, ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು, ಅದನ್ನು ಸಂಚರಿಸಿ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:24
6 ತಿಳಿವುಗಳ ಹೋಲಿಕೆ  

ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.


ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು.


ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು