Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:28
20 ತಿಳಿವುಗಳ ಹೋಲಿಕೆ  

ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.


ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”


ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.


ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.


ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.


ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಅದಕ್ಕೆ ನಾನು, “ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.


ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.


ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.


ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು