Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:3
6 ತಿಳಿವುಗಳ ಹೋಲಿಕೆ  

ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.


ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು