Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:30
30 ತಿಳಿವುಗಳ ಹೋಲಿಕೆ  

ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.


ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು” ಎಂದು ಹೇಳಿದೆನು.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ಅದಕ್ಕೆ ನಾನು, “ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.


ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.


ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.


‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,


ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು