ಧರ್ಮೋಪದೇಶಕಾಂಡ 1:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀವು ಈ ಸ್ಥಳಕ್ಕೆ ಸೇರುವ ಪರ್ಯಂತರ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೋ ಹಾಗೆಯೇ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಹೊತ್ತುತಂದರಲ್ಲವೇ?” ಎಂದು ನಿಮಗೆ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಹೊರುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊತ್ತು ತಂದರಲ್ಲವೇ?” ಎಂದು ನಿಮಗೆ ಹೇಳಿದೆನು. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.