ಧರ್ಮೋಪದೇಶಕಾಂಡ 1:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನೀವು ಹೋಗಬೇಕಾದ ದಾರಿಯನ್ನು ತೋರಿಸುವದಕ್ಕೂ ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವದಕ್ಕೂ ರಾತ್ರಿಹೊತ್ತು ಬೆಂಕಿಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು. ಅಧ್ಯಾಯವನ್ನು ನೋಡಿ |