Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:38
20 ತಿಳಿವುಗಳ ಹೋಲಿಕೆ  

ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.


ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.


ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.


ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.


ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.


ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.


ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,


ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.


ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ


“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು