ಧರ್ಮೋಪದೇಶಕಾಂಡ 1:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೆ ಯೆಹೋವನು ನನಗೆ, “ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಆ ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆದರೆ ಸರ್ವೇಶ್ವರ ನನಗೆ, ‘ನಾನು ಇವರ ಮಧ್ಯೆ ಇಲ್ಲವಾದುದರಿಂದ ಇವರು ಸೋತುಹೋಗುವರು; ಯುದ್ಧಮಾಡಲೂಬಾರದು, ಆ ಮಲೆನಾಡಿಗೆ ಹೋಗಲೂಬಾರದು ಎಂದು ಇವರಿಗೆ ಆಜ್ಞಾಪಿಸು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆದರೆ ಯೆಹೋವನು ನನಗೆ - ನಾನು ಇವರ ಮಧ್ಯದಲ್ಲಿ ಇಲ್ಲವಾದದರಿಂದ ಇವರು ಸೋತು ಹೋಗುವರು; ಯುದ್ಧಮಾಡಲೂಬಾರದು, ಆ ಬೆಟ್ಟದ ಸೀಮೆಗೆ ಹೋಗಲೂಬಾರದು ಎಂದು ಇವರಿಗೆ ಆಜ್ಞಾಪಿಸು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕೆಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿಬಿಡುವರು!’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆದರೆ ಯೆಹೋವ ದೇವರು ನನಗೆ, “ ‘ಏರಿ ಹೋಗಬೇಡಿರಿ, ಯುದ್ಧಮಾಡಬೇಡಿರಿ. ಏಕೆಂದರೆ ನಾನು ನಿಮ್ಮ ಮಧ್ಯದಲ್ಲಿ ಇಲ್ಲ. ನೀವು ನಿಮ್ಮ ಶತ್ರುಗಳಿಂದ ಸೋಲನ್ನು ಅನುಭವಿಸುವಿರಿ,’ ಎಂದು ಅವರಿಗೆ ಹೇಳು,” ಎಂದರು. ಅಧ್ಯಾಯವನ್ನು ನೋಡಿ |