Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನೀವು ಹಿಂದಿರುಗಿ ಬಂದು ಸರ್ವೇಶ್ವರನ ಮುಂದೆ ಗೋಳಾಡಿದಿರಿ. ಆಗ ಅವರು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ನಿಮ್ಮನ್ನು ರಕ್ಷಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ರಕ್ಷಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:45
9 ತಿಳಿವುಗಳ ಹೋಲಿಕೆ  

ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?


ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು