Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಹೋರೇಬಿನಲ್ಲಿ ನಮ್ಮ ದೇವರಾದ ಸರ್ವೇಶ್ವರ ನಮಗೆ, ‘ನೀವು ಈ ಬೆಟ್ಟದ ಬಳಿ ವಾಸಿಸಿದ್ದು ಸಾಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ - ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನಮ್ಮ ದೇವರಾದ ಯೆಹೋವನು ಹೋರೇಬ್ ಬೆಟ್ಟದಲ್ಲಿ ನಮ್ಮೊಂದಿಗೆ ಮಾತಾಡಿದನು. ಆತನು ಹೇಳಿದ್ದೇನೆಂದರೆ: ‘ನೀವು ಈ ಪ್ರದೇಶಕ್ಕೆ ಬಂದು ಬಹಳ ಕಾಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮಗೆ, “ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:6
9 ತಿಳಿವುಗಳ ಹೋಲಿಕೆ  

ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.


ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:


ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.


ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.


ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು