ಧರ್ಮೋಪದೇಶಕಾಂಡ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.