Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 10:22
14 ತಿಳಿವುಗಳ ಹೋಲಿಕೆ  

ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.


ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.


ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.


ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.


ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.


ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.


ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.


ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.


ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು