Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಿಮ್ಮ ದೇವರಾದ ಯೆಹೋವನಲ್ಲಿ ಪ್ರೀತಿಯಿಟ್ಟು ಆತನ ನಿಯಮಗಳನ್ನು ಕೈಕೊಂಡು ಆತನ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:1
22 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.


ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.


ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!


ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.


ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.


ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,


ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.


ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು