Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:10
7 ತಿಳಿವುಗಳ ಹೋಲಿಕೆ  

ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.


ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.


ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.


ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.


ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.


ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು