Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ನೀವು ಎಚ್ಚರದಿಂದಿರಬೇಕು; ನೀವು ಭ್ರಾಂತಿಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:16
29 ತಿಳಿವುಗಳ ಹೋಲಿಕೆ  

ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,


ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.


ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.


“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.


ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,


ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.


ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು