Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರ ಪ್ರಯೋಗಿಸಿದ ಶಿಕ್ಷಣಕ್ರಮವನ್ನೂ ಮಹಿಮೆಯನ್ನೂ ಭುಜಬಲವನ್ನೂ ಶಿಕ್ಷಾಹಸ್ತವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನ ಶಿಕ್ಷಣಕ್ರಮವನ್ನೂ ಮಹಿಮೆಯನ್ನೂ ಭುಜಬಲವನ್ನೂ ಶಿಕ್ಷಾಹಸ್ತವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮಗೆ ಉಪದೇಶ ಮಾಡುವುದಕ್ಕಾಗಿ ನಿಮ್ಮ ದೇವರಾದ ಯೆಹೋವನು ಮಾಡಿದ ಮಹತ್ಕಾರ್ಯಗಳನ್ನು ನೆನಪುಮಾಡಿರಿ. ಆತನ ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಆತನು ಎಂಥಾ ಶಕ್ತಿಶಾಲಿ ಎಂದು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರ ಶಿಕ್ಷಣವನ್ನು ಅನುಭವಿಸಿದ್ದು ನಿಮ್ಮ ಮಕ್ಕಳಲ್ಲ: ದೇವರ ಮಹತ್ವವನ್ನೂ, ಅವರ ಬಲವಾದ ಕೈಯನ್ನೂ, ಅವರು ಚಾಚಿದ ಭುಜವನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:2
14 ತಿಳಿವುಗಳ ಹೋಲಿಕೆ  

ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.


ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.


ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.


“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?


ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು