ಧರ್ಮೋಪದೇಶಕಾಂಡ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶ ಎಷ್ಟುಕಾಲ ನಿಂತಿರುವುದೋ ಅಷ್ಟು ಕಾಲವೂ ನೀವು ಹಾಗು ನಿಮ್ಮ ಸಂತತಿಯವರು ನಿಮ್ಮ ಪಿತೃಗಳಿಗೆ ಸರ್ವೇಶ್ವರ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ನಾಡಿನಲ್ಲಿ ಬಾಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಾದರೆ ಭೂವಿುಯ ಮೇಲೆ ಆಕಾಶವು ಎಷ್ಟು ಕಾಲ ನಿಂತಿರುವದೋ ಅಷ್ಟು ಕಾಲ ನೀವೂ ನಿಮ್ಮ ಸಂತತಿಯವರೂ ನಿಮ್ಮ ಪಿತೃಗಳಿಗೆ ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ಆ ದೇಶದಲ್ಲಿ ಬಾಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ. ಅಧ್ಯಾಯವನ್ನು ನೋಡಿ |