ಧರ್ಮೋಪದೇಶಕಾಂಡ 11:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳೂ ನಿಮಗಾಗುವವು; ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು. ಅಧ್ಯಾಯವನ್ನು ನೋಡಿ |
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.