ಧರ್ಮೋಪದೇಶಕಾಂಡ 11:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು. ಅಧ್ಯಾಯವನ್ನು ನೋಡಿ |