Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ, ಆಶೀರ್ವಾದ ನಿಮ್ಮದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆತನಿಂದ ಆಶೀರ್ವಾದ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:27
14 ತಿಳಿವುಗಳ ಹೋಲಿಕೆ  

ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು