Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ಬೆಟ್ಟಗಳು ಜೋರ್ಡನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಬೆಟ್ಟಗಳು ಯೊರ್ದನ್ ಹೊಳೆಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಈ ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಈ ಬೆಟ್ಟಗಳು ಪಶ್ಚಿಮ ದಿಕ್ಕಿನಲ್ಲಿವೆ. ಗಿಲ್ಗಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:30
6 ತಿಳಿವುಗಳ ಹೋಲಿಕೆ  

ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.


ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.


ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.


ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು