ಧರ್ಮೋಪದೇಶಕಾಂಡ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ರೂಬೇನನ ಮೊಮ್ಮಕ್ಕಳೂ ಎಲೀಯಾಬನ ಮಕ್ಕಳೂ ಆದ ದಾತಾನ್ ಅಬೀರಾಮರು ದಂಗೆಯೆದ್ದಾಗ ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲ ಪಶುಪ್ರಾಣಿಗಳನ್ನೂ ಇಸ್ರಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿ. ಈ ಕಾರ್ಯಗಳನ್ನು ನೋಡದೆ ಹಾಗು ತಿಳಿಯದೆ ಇರುವ ನಿಮ್ಮ ಮಕ್ಕಳಿಗೆ ನಾನು ಈ ಮಾತನ್ನು ಹೇಳುತ್ತಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರೂಬೇನನ ಮೊಮ್ಮಕ್ಕಳೂ ಎಲೀಯಾಬನ ಮಕ್ಕಳೂ ಆದ ದಾತಾನ್ ಅಬೀರಾಮರು [ತಿರುಗಿಬಿದ್ದಾಗ] ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲ್ಯರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಈ ಕಾರ್ಯಗಳನ್ನು ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳಿಗೆ ನಾನು ಈ ಮಾತನ್ನು ಹೇಳುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರೂಬೇನ್ ಕುಲದ ಎಲೀಯಾಬನ ಮಕ್ಕಳಾದ ದಾತಾನನಿಗೆ ಮತ್ತು ಅಬೀರಾಮನಿಗೆ ಯೆಹೋವನು ಮಾಡಿದ್ದನ್ನು ನೀವೇ ನೋಡಿದ್ದೀರಿ. ನಿಮ್ಮ ಕಣ್ಣಮುಂದೆಯೇ ಭೂಮಿಯು ಬಾಯಿ ತೆರೆದು ಅವರನ್ನು, ಅವರ ಹೆಂಡತಿಮಕ್ಕಳನ್ನು, ಅವರ ಗುಡಾರವನ್ನು, ಸೇವಕರನ್ನು, ಅವರ ಪಶುಗಳನ್ನು ನುಂಗಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |