ಧರ್ಮೋಪದೇಶಕಾಂಡ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು. ಅಧ್ಯಾಯವನ್ನು ನೋಡಿ |
ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.