Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ರಕ್ತವನ್ನು ಮಾತ್ರ ಭುಜಿಸಬೇಡಿರಿ. ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:16
15 ತಿಳಿವುಗಳ ಹೋಲಿಕೆ  

ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.


ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.


ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು.


ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;


“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?


ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು