ಧರ್ಮೋಪದೇಶಕಾಂಡ 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವದಕ್ಕೆ ಇಷ್ಟಪಟ್ಟರೆ ಮಾಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20-21 “ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು. ಅಧ್ಯಾಯವನ್ನು ನೋಡಿ |