Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜಿಂಕೆ ದುಪ್ಪಿಗಳನ್ನು ಶುದ್ಧರೂ ಅಶುದ್ಧರೂ ತಿನ್ನುವ ಪ್ರಕಾರ ದನಕುರಿಗಳನ್ನೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಜಿಂಕೆದುಪ್ಪಿಗಳನ್ನು ಶುದ್ಧರೂ ಅಶುದ್ಧರೂ ತಿನ್ನುವ ಪ್ರಕಾರ ದನಕುರಿಗಳನ್ನೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜಿಂಕೆಯನ್ನಾಗಲಿ ಸಾರಂಗವನ್ನಾಗಲಿ ತಿನ್ನುವಂತೆ ನೀವು ಈ ಮಾಂಸವನ್ನು ತಿನ್ನಬಹುದು. ಶುದ್ಧರಾಗಿರುವವರೂ ಅಶುದ್ಧರಾಗಿರುವವರೂ ಈ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:22
5 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.


ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.


ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.


ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು