ಧರ್ಮೋಪದೇಶಕಾಂಡ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ರಕ್ತವು ಜೀವಾಧಾರವಾದದರಿಂದ ಮಾಂಸದೊಡನೆ ರಕ್ತವನ್ನು ಭುಜಸಲೇ ಕೂಡದೆಂಬದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |