Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:32
9 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.


ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು